Telegram Join My Telegram WhatsApp Join My WhatsApp

Tumkur Metro: ಬೆಂಗಳೂರು-ತುಮಕೂರು ಮೆಟ್ರೋಗೆ ಗ್ರೀನ್ ಸಿಗ್ನಲ್? DPR ಸ್ವೀಕರಿಸಿದ ಸರ್ಕಾರ; ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

Tumkur Metro: ಬೆಂಗಳೂರು-ತುಮಕೂರು ಮೆಟ್ರೋಗೆ ಗ್ರೀನ್ ಸಿಗ್ನಲ್? DPR ಸ್ವೀಕರಿಸಿದ ಸರ್ಕಾರ; ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

ಬೆಂಗಳೂರು ನಗರದ ಟ್ರಾಫಿಕ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅದರ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ಮೆಟ್ರೋ ಜಾಲ ವಿಸ್ತರಣೆಗೆ ಹೆಚ್ಚಿನ ಒತ್ತು ನೀಡುತ್ತಿದೆ. ಇದೀಗ ಬೆಂಗಳೂರು-ತುಮಕೂರು ಮೆಟ್ರೋ ಯೋಜನೆಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದ್ದು, ಮಾದಾವರದಿಂದ ತುಮಕೂರಿನವರೆಗೆ ಮೆಟ್ರೋ ಮಾರ್ಗ ವಿಸ್ತರಣೆಗೆ ಸಿದ್ಧಪಡಿಸಲಾದ ಡಿಪಿಆರ್ (Detailed Project Report) ಅನ್ನು ರಾಜ್ಯ ಸರ್ಕಾರ ಅಧಿಕೃತವಾಗಿ ಸ್ವೀಕರಿಸಿದೆ. ಈ ಬೆಳವಣಿಗೆ ತುಮಕೂರು ಭಾಗದ ಜನರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.